ಬೆಂಗಳೂರು: ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹೇರಲಾಗಿದೆ.
ಕರ್ನಾಟಕ ರಾಜ್ಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಹಗಲು ವೇಳೆಯಲ್ಲಿಯೂ ಧ್ವನಿವರ್ಧಕಗಳನ್ನು ಸುತ್ತಲಿನ ಗಾಳಿಯ ಗುಣಮಟ್ಟಕ್ಕೆ ಅನುಗುಣವಾಗಿ ಬಳಕೆ ಮಾಡಬೇಕೆಂದು ಶಬ್ದ ಮಾಲಿನ್ಯ ಕಾನೂನು ಅನ್ವಯ ಸುತ್ತೋಲೆ ಹೊರಡಿಸಲಾಗಿದೆ.
ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ನ್ಯಾಯಾಲಯಗಳಲ್ಲೂ ಪ್ರಶ್ನಿಸಲಾಗಿದೆ. ಕೆಲವು ಮಸೀದಿಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಝಾನ್, ಪ್ರಮುಖ ಸೂಚನೆ ನೀಡಲು ನಿಯಮಾನುಸಾರ ಧ್ವನಿವರ್ಧಕ ಬಳಸಬೇಕು.
ಧಾರ್ಮಿಕ, ಸಾಮಾಜಿಕ, ಜ್ಞಾನಾಧಾರಿತ, ಸಾಂಸ್ಕೃತಿಕ ಕಾರ್ಯಕ್ರಮಗಳು ಜನ ಸೇರಿದ ಸಂದರ್ಭದಲ್ಲಿ ಧ್ವನಿವರ್ಧಕ ಬಳಸಬಹುದಾಗಿದ್ದು, ಎಷ್ಟು ಪ್ರಮಾಣದಲ್ಲಿ ಬಳಸಬೇಕೆಂದು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಸಿಬೇಕು. ಮಸೀದಿ, ದರ್ಗಾ ಸುತ್ತಮುತ್ತ ಭಿಕ್ಷಾಟನೆಗೆ ಪ್ರೋತ್ಸಾಹ ನೀಡಬಾರದು. ಅಂತಹವರಿಗೆ ನೆರವು ಕಲ್ಪಸಬೇಕು. ಮಸಿದಿ ಮತ್ತು ದರ್ಗಾ ವ್ಯಾಪ್ತಿಯಲ್ಲಿ ಪಟಾಕಿ ಹಚ್ಚಬಾರದು ಎಂದು ಹೇಳಲಾಗಿದೆ.