
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒನಹವೆ ಮುಂದುವರೆದಿದೆ. ಈ ನಡುವೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಧಾರವಾಡ, ಕಲಬುರ್ಗಿ, ರಾಯಚೂರು, ಗದಗ, ಕೊಪ್ಪಳ, ವಿಜಯಪುರ, ವಿಜಯನಗರ, ಬಳ್ಳಾರಿ, ಮಂಡ್ಯ, ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ವಾತಾವರಣವಿರಲಿದ್ದು, 31 ಡಿಗ್ರಿ ಗರಿಷ್ಠ ಉಷ್ಣಾಂಶ 17 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿಯಲ್ಲಿ 31.5 ಡಿಗ್ರಿ ಗರಿಷ್ಠ ಉಷ್ಣಾಂಶ, ಬೀದರ್ ನಲ್ಲಿ 30 ಡಿಗ್ರಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35 ಡಿಗ್ರಿ ಗರಿಷ್ಠ ಉಷ್ಣಾಂಶ, ಗದಗದಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆ 33 ಡಿಗ್ರಿ, ಶಿವಮೊಗ್ಗ, 33 ಡಿಗ್ರಿ, ಚಾಮರಾಅಜನಗರ 33.8 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.