ಬೆಗಳೂರು: ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಫೆಬ್ರವರಿ ಆರಂಭದಲ್ಲಿಯೇ ಬಿರು ಬೇಸಿಗೆ ಅನುಭವವಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.
ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಹೆಚ್ಚುತ್ತಿದ್ದು, ಕರಾವಳಿ ಸೇರಿದಂತೆ ಕೆಲವೆಡೆಗಳಲ್ಲಿ ಮಾತ್ರ ಚಳಿ ವಾತಾವರಣವಿದೆ.
ವಿಜಯಪುರದಲ್ಲಿ 32 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ ನಲ್ಲಿ 30 ಡಿಗ್ರಿ, ಬಾಗಲಕೋಟೆಯಲ್ಲಿ 35 ಡಿಗ್ರಿ ಗರಿಷ್ಥ ಉಷ್ಣಾಂಶ, ಕಲಬುರ್ಗಿ 33.4 ಡಿಗ್ರಿ, ರಾಯಚೂರಿನಲ್ಲಿ 33.4 ಡಿಗ್ರಿ, ಚಾಮರಾಜನಗರ 33.9 ಡಿಗ್ರಿ ಗರಿಷ್ಠ ಉಷ್ಣಾಂಶ, ಹಾಸನ 34 ಡಿಗ್ರಿ, ಶಿವಮೊಗ್ಗ 32.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 32. ಡಿಗ್ರಿ, ಕರವಾರದಲ್ಲಿ 34 ಡಿಗ್ರಿ ಗರಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 34.0 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ ಸೇರಿದಂತೆ ಕೆಲವೆಡೆ ಚಳಿ ಇದ್ದು, ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಆಗಾಗ ಬಿಸಿಲು ಬೀಳಲಿದೆ.
ಇನ್ನು ಬೇಸಿಗೆಯ ಆರಂಭದಲ್ಲಿಯೇ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ರಾಜರಾಜೇಶ್ವರಿನಗರ, ಕೆಂಗೇರಿ ಸೇರಿದಂತೆ ಹಲವೆಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.