ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ, ಶೀತ ಗಾಳಿ ಆರಂಭವಾಗಿದೆ. ಮುಂದಿನ ಐದು ದಿನಗಳಕಾಲ ಉತ್ತರ ಒಳನಾಡಿನಲ್ಲಿ ಚಳಿ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಯಚೂರು, ಗದಗದಲ್ಲಿ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಈಗಾಗಲೇ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಮಂಜು ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೆಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಬೀಳಲಿದೆ.
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮೈ ಕೊರೆವ ಚಳಿ ಮುಂದುವರೆಯಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಬೀದರ್, ಕಲಬುರಗಿ, ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಇರಲಿದೆ.
ದಾವಣಗೆರೆಯಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಹೆಚ್ ಎ ಎಲ್ ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.