ಬೆಂಗಳೂರು: ರಾಜ್ಯಾದ್ಯಂತ ಚಳಿ ಪ್ರಮಾಣ ದಿನದಿದ ದಿನಕ್ಕೆ ಹೆಚ್ಚಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಮೈ ಕೊರೆವ ಚಳಿ ಆರಂಭವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 3.5 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಶ್ಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿಯೂ ವಿಪರೀತ ಚಳಿ ಹೆಚ್ಚಾಗಿದೆ. ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ ಹಾವೇರಿ, ಕಲಬುರಗಿ, ಬಗಲಕೋಟೆ, ಬೀದರ್, ಧಾರವಾಡ ಜಿಲ್ಲೆಗಳಲ್ಲಿಯೂ ಕಡಿಮೆ ಉಷ್ಣಾಂಶ ದಾಖಲಾಗಿದ್ದು, ಮೈಕೊರೆವ ಚಳಿ ಹೆಚ್ಚಲಿದೆ.