ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚ್ಳಿ ನಡುವೆಯೇ ಡಿಸೆಂಬರ್ 19ರಿಂದ ಮಳೆಯಾವ ಸಾಧ್ಯತೆ ಇದೆ. ಒಂದು ವೇಳೆ ಮತ್ತೆ ಮಳೆಯಾದರೆ ಚಳಿ ಪ್ರಮಾಣ ಕಡಿಮೆಯಾಗಲಿದೆ. ಬೆಳೆಗಳಿಗೆ ಸಮಸ್ಯೆಗಾಲಿದೆ.
ಬಿಜಾಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಟ ಉಷ್ಣಾಂಶ ದಾಖಲಾಗಿದೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ 24.2 ಡಿಗ್ರಿ ಸೆನ್ಸಿಯಸ್ ಗರಿಷ್ಠ ಉಷ್ಣಂಶ 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಗದಗ, ಹಾವೇರಿ, ಧರವಾಡ, ಕೊಪ್ಪಳ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಮಗ್ಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಐದು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ ಇದೆ.