ಬೆಂಗಳೂರು: ರಾಜ್ಯದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೇ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಒಳಾಂಗಣ ಕ್ರೀಡಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ನಾರಾಯಣ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ತೆರೆಯಲಾಗಿರುವ “ಮಲ್ಲೇಶ್ವರಂ ಕೌಶಲ್ಯ ಕೇಂದ್ರ”ದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇಂದು ಕೌಶಲ್ಯವಿರುವುದರ ಜತೆಗೆ, ಆ ಕೌಶಲ್ಯಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ನೌಕರಿ ಸಿಗುತ್ತದೆಯೇ ಎಂಬುದು ಮುಖ್ಯವಾದ ವಿಚಾರ. ಹೀಗಾಗಿ ಜಾಬ್ ಮಾರುಕಟ್ಟೆಗೆ ತಕ್ಕ ಹಾಗೆ, ಅಂದರೆ ಕೈಗಾರಿಕೆಗಳಿಗೆ ಅಗತ್ಯವಿರುವ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಂಕ್ಷಿಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.