ಕಳೆದ ತಿಂಗಳು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್ ಹಾಗೂ ಅವರ ಸಹೋದರ ಡಾ. ರಾಮಚಂದ್ರ ಪ್ರಭು ತಮ್ಮ ದೇಹದ ಪ್ಲಾಸ್ಮಾವನ್ನು ಕೊರೊನಾ ರೋಗಿಗಳಿಗೆ ದಾನ ಮಾಡಿದ್ದಾರೆ.
ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. (HCG) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕ ಮತ್ತವರ ಸಹೋದರ ಬುಧವಾರದಂದು ಪ್ಲಾಸ್ಮಾ ದಾನ ಮಾಡಿದ್ದಾರೆ. ಇದರೊಂದಿಗೆ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಡಾ. ರಂಗನಾಥ್ ಪಾತ್ರರಾಗಿದ್ದಾರೆ.