alex Certify ಅಜ್ಜಿ ಅಸ್ಥಿ ವಿಸರ್ಜನೆಗೆ ತೆರಳಿದ್ದ ಮೊಮ್ಮಗ ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಜ್ಜಿ ಅಸ್ಥಿ ವಿಸರ್ಜನೆಗೆ ತೆರಳಿದ್ದ ಮೊಮ್ಮಗ ನೀರು ಪಾಲು

ಮಂಡ್ಯ: ಅಜ್ಜಿಯ ಅಸ್ಥಿ ವಿಸರ್ಜನೆಗೆಂದು ಕಾವೇರಿ ನದಿಗೆ ಇಳಿದ ಮೊಮ್ಮಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಧಾರುಣ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ನೀರುಪಾಲಾದ ವ್ಯಕ್ತಿಯನ್ನು ಶ್ರೀಪ್ರಸಾದ್ (32) ಎಂದು ಗುರುತಿಸಲಾಗಿದೆ. ಅಜ್ಜಿಯ ಅಸ್ಥಿ ವಿಸರ್ಜನೆಗೆ ಎಂದು ಕಾವೇರಿ ನದಿಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಜ್ಜಿಯ ಅಸ್ಥಿ ವಿಸರ್ಜನೆಗೆಂದು ಶ್ರೀಪ್ರಸಾದ್ ಹಾಗೂ ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದು, ಅಸ್ಥಿ ವಿಸರ್ಜನೆಗಾಗಿ ಮೂವರು ನದಿ ನೀರಿಗಿಳಿದಿದ್ದಾರೆ. ಈ ವೇಳೆ ಶ್ರೀಪ್ರಸಾದ್ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...