alex Certify ಅದ್ಯಾವುದಪ್ಪ ನನಗೆ ಗೊತ್ತಿರದ ಸ್ಟ್ರ್ಯಾಟಜಿ…?: ವಿಜಯೇಂದ್ರಗೆ ಸಿದ್ದರಾಮಯ್ಯ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅದ್ಯಾವುದಪ್ಪ ನನಗೆ ಗೊತ್ತಿರದ ಸ್ಟ್ರ್ಯಾಟಜಿ…?: ವಿಜಯೇಂದ್ರಗೆ ಸಿದ್ದರಾಮಯ್ಯ ಪ್ರಶ್ನೆ

ಶಿರಾ ಕ್ಷೇತ್ರಕ್ಕೂ ಬಿ.ವೈ.ವಿಜಯೇಂದ್ರಗೂ ಏನು ಸಂಬಂಧ..? ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಎಂಬುದನ್ನು ಬಿಟ್ಟರೆ ಬೇರೆ ಏನು ಸಂಬಂಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರಗಳ ಉಪಚುನಾವಣಾ ಕಾವು ಏರತೊಡಗಿದ್ದು, ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆ ಬೆಳಗಾವಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಶಿರಾ ಕ್ಷೇತ್ರದಲ್ಲಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬೀಡು ಬಿಟ್ಟಿರುವುದಕ್ಕೆ ಕಿಡಿಕಾರಿದ್ದಾರೆ. ಶಿರಾ ಕ್ಷೇತ್ರಕ್ಕೂ ವಿಜಯೇಂದ್ರಗೂ ಏನು ಸಂಬಂಧ? ದುಡ್ಡು ಖರ್ಚು ಮಾಡಲು ಹೋಗಿ ಅಲ್ಲಿ ಕುಳಿತಿದ್ದಾರೆ. ಕೆ.ಆರ್. ಪೇಟೆಯಲ್ಲಿ ದುಡ್ಡು ಖರ್ಚು ಮಾಡಿದರು. ಇದೀಗ ಶಿರಾದಲ್ಲಿ ಮಾಡುತ್ತಿದ್ದಾರೆ ಎಂದು ಗುಡುಗಿದರು.

ಕೆ.ಆರ್. ಪೇಟೆಯಲ್ಲಿ ಮಾಡಿದ ಸ್ಟ್ರ್ಯಾಟಜಿಯನ್ನು ಶಿರಾದಲ್ಲೂ ಮಾಡ್ತಾರಂತೆ. ಅದ್ಯಾವುದಪ್ಪ ನನಗೆ ಗೊತ್ತಿರದ ಸ್ಟ್ಯ್ರಾಟಜಿ..? ಅದೇನೇ ಮಾಡಿದರೂ ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...