ಅನ್ನದಾತರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗೆ ಈಗ ನೀಡುತ್ತಿರುವ ಶೇಕಡಾ 40 ರಷ್ಟು ಸೀಟುಗಳನ್ನು ಶೇಕಡಾ 50 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.
ಬೀದರ್ ತಾಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದು, ಬಜೆಟ್ ನಲ್ಲಿ ಇದನ್ನು ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಕೃಷಿಕರ ಖಾತೆಗೆ 6 ಸಾವಿರ ರೂ. ಜಮಾ: ಇಲ್ಲಿದೆ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ
ಅಲ್ಲದೇ ಡಿಪ್ಲೋಮಾ ಉತ್ತೀರ್ಣರಾದ ಮೂರು ಸಾವಿರ ಮಂದಿಯನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಹತ್ತು ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಇವರುಗಳು ಮೂರು ತಿಂಗಳ ಕಾಲ ಬೆಳೆ ಸಮೀಕ್ಷೆ ಹಾಗೂ ಇತರ ಏಳು ತಿಂಗಳ ಕಾಲ ಕೃಷಿ ಇಲಾಖೆಯ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಲುಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.