alex Certify ಅಪರಿಚಿತರಿಂದ ಬರುವ ವಿಡಿಯೋ ಕಾಲ್ ರಿಸೀವ್ ಮಾಡುವ ಮುನ್ನ ಇರಲಿ ಎಚ್ಚರ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತರಿಂದ ಬರುವ ವಿಡಿಯೋ ಕಾಲ್ ರಿಸೀವ್ ಮಾಡುವ ಮುನ್ನ ಇರಲಿ ಎಚ್ಚರ…!

ತಂತ್ರಜ್ಞಾನ ಬೆಳೆದಂತೆ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈವರೆಗೆ ಮೊಬೈಲ್ ಗೆ ಕರೆ ಮಾಡಿ ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ಖಾತೆಯ ಮಾಹಿತಿಯನ್ನು ಪಡೆದುಕೊಂಡು ಹಣ ಲಪಟಾಯಿಸುತ್ತಿದ್ದ ವಂಚಕರು ಈಗ ಮತ್ತೊಂದು ವಿಧಾನವನ್ನು ಕಂಡುಕೊಂಡಿದ್ದಾರೆ.

ಹೌದು, ವಿಡಿಯೋ ಕಾಲ್ ಮಾಡಿ ಅಶ್ಲೀಲ ಚಿತ್ರವನ್ನು ಬಿತ್ತರಿಸುವ ವಂಚಕರು ಬಳಿಕ ಮತ್ತೊಮ್ಮೆ ಕರೆ ಮಾಡಿ ನೀವು ಹಣ ನೀಡದಿದ್ದರೆ ಅಶ್ಲೀಲ ಚಿತ್ರ ವೀಕ್ಷಿಸಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.

ಇಂತಹುದೊಂದು ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದ್ದು, ಪರಿಸರ ಹೋರಾಟಗಾರರೊಬ್ಬರಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವಿಡಿಯೋ ಬಿತ್ತರಿಸಿದ ಬಳಿಕ ಹಣ ನೀಡುವಂತೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಬೆದರಿಕೆಗೆ ಒಳಗಾದ ವ್ಯಕ್ತಿ ಈಗ ಸೈಬರ್ ಪೊಲೀಸರಿಗೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...