ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪುತ್ರಿ ಸೃಷ್ಟಿ ಪಾಟೀಲ್, ಅಪ್ಪನ ಹೇಳಿಕೆ ಸರಿಯಾಗಿಯೇ ಇದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ಸಚಿವ ಬಿ.ಸಿ. ಪಾಟಿಲ್ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಮಗಳು ಸೃಷ್ಟಿ, ಜೀವ ಮತ್ತು ಜೀವನ ಇರೋದು ಒಂದು. ಇದ್ದು ಜಯಿಸಬೇಕು ಹೊರತು ಆತ್ಮಹತ್ಯೆ ಮಾಡಿಕೊಳ್ಳುವುದು ಸರಿಯಲ್ಲ. ಅವರು ರೈತರಾಗಲಿ ಅಥವಾ ಬೇರೆ ಯಾರೇ ಆಗಲಿ ಆತ್ಮಹತ್ಯೆಗೆ ಶರಣಾದಾಗ ಅವರ ಹೆಂಡತಿ ಮಕ್ಕಳ ಗತಿಯೇನು ಎಂದು ಪ್ರಶ್ನಿಸಿದ್ದಾರೆ.
ಈ ನಡುವೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಬಿ.ಸಿ.ಪಾಟೀಲ್, ಮಂಡ್ಯ ಜಿಲ್ಲೆಯ ಲಕ್ಷ್ಮಿದೇವಮ್ಮ ಎಂಬ ಮಹಿಳೆಯೊಬ್ಬರು ತಮ್ಮ 6.5 ಎಕರೆ ಭೂಮಿಯಲ್ಲಿ ಸಾವಯವ ಕೃಷಿ ಮಾಡಿ ಸಾಧನೆ ಮಾಡಿದ್ದಾರೆ. ಆಕೆ ಎಲ್ಲಾ ರೈತರಿಗೆ ಮಾದರಿಯಾಗಿದ್ದಾರೆ. ಇದನ್ನು ಉದಾಹರಣೆಯನ್ನಾಗಿಟ್ಟುಕೊಂಡು ಎಲ್ಲಾ ರೈತರು ಸಂಕಷ್ಟವನ್ನು ಎದುರಿಸಿ ನಿಂತು ಸಾಧಿಸಬೇಕು ಎಂದು ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದಿದ್ದಾರೆ.