ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಸೋಂಕಿತರ ಫೋಟೋ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು. ಇದು ಸೋಂಕಿತರ ಖಾಸಗಿತನಕ್ಕೆ ಧಕ್ಕೆ ತರುತ್ತಿದೆ ಎಂದು ಹೇಳಲಾಗಿತ್ತು.
ಇದೀಗ ಈ ಕುರಿತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಕೊರೊನಾ ಸೋಂಕಿತರ ಫೋಟೋ ತೆಗೆಯುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಸೋಂಕಿತರ ಮಾಹಿತಿ ಬಹಿರಂಗವಾದರೆ ಇದು ಸುತ್ತಮುತ್ತಲಿನ ಜನರಲ್ಲಿ ಭಯ ಹುಟ್ಟಿಸುವುದಲ್ಲದೆ ನೈತಿಕ ಸ್ಥೈರ್ಯವನ್ನು ಕುಗ್ಗಿಸುವಂತಾಗುತ್ತದೆ. ಇದು ಸೋಂಕಿತರ ಖಾಸಗಿತನಕ್ಕೂ ಧಕ್ಕೆ ತರುತ್ತದೆ. ಹೀಗಾಗಿ ಸೋಂಕಿತರ ಅನುಮತಿಯಿಲ್ಲದೆ ಫೋಟೋ ಮತ್ತು ವಿಡಿಯೋ ತೆಗೆಯಲು ಮುಂದಾದರೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.