alex Certify ಅರಣ್ಯದಲ್ಲಿ ‘ವೀಕೆಂಡ್ ಪಾರ್ಟಿ’ ಮಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಣ್ಯದಲ್ಲಿ ‘ವೀಕೆಂಡ್ ಪಾರ್ಟಿ’ ಮಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು

ಶಿವಮೊಗ್ಗ ಜಿಲ್ಲೆಯ ಗಾಜನೂರಿನಿಂದ ಮಂಡಗದ್ದೆವರೆಗಿನ ಮಾರ್ಗದ ಮಧ್ಯೆ ಅಲ್ಲಲ್ಲಿ ರಸ್ತೆಯ ಬದಿ ಅಥವಾ ಅರಣ್ಯದಂಚಿನಲ್ಲಿ ಪಾರ್ಟಿ ಮಾಡುವುದು ಸಾಮಾನ್ಯವಾಗಿತ್ತು. ಅದರಲ್ಲೂ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಆದ ಬಳಿಕ ಇದು ಮತ್ತಷ್ಟು ಹೆಚ್ಚಳವಾಗಿತ್ತು.

ಇದೀಗ ಅಂಥವರಿಗೆ ಅರಣ್ಯಾಧಿಕಾರಿಗಳು ಬಿಸಿ ಮುಟ್ಟಿಸಿದ್ದು, ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ 4 ತಂಡ ರಚನೆ ಮಾಡಿ ದಾಳಿ ನಡೆಸಲಾಗಿದೆ. ಈ ವೇಳೆ 5.2 ಲೀಟರ್ ಬಿಯರ್ ಹಾಗೂ 3.780 ಮೀಟರ್ ಐಎಂಎಲ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ಒಟ್ಟು 25 ಕಡೆ ದಾಳಿ ನಡೆಸಲಾಗಿದ್ದು 19 ಪ್ರಕರಣಗಳನ್ನು ದಾಖಲಿಸಲಾಗಿದೆ. ಗಾಜನೂರು, ಸಕ್ರೆಬೈಲ್, ಮಂಡಗದ್ದೆ ವ್ಯಾಪ್ತಿಯಲ್ಲಿ ರಸ್ತೆ ಬದಿ ವಾಹನಗಳನ್ನು ನಿಲ್ಲಿಸಿಕೊಂಡು ಇವರುಗಳು ಮದ್ಯ ಸೇವನೆ ಮಾಡುತ್ತಿದ್ದರೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...