ನವದೆಹಲಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಹಿಂದ ಸಮಾವೇಶ ಪ್ರಸ್ತಾಪಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಈ ವೇಳೆ ರಾಜ್ಯ ರಾಜಕೀಯ ವಿದ್ಯಮಾನಗಳು ಹಾಗೂ ಅಹಿಂದ ಸಮಾವೇಶದ ಕುರಿತಾಗಿ ತಮ್ಮ ನಿರ್ಧಾರಗಳ ಬಗ್ಗೆ ತಿಳಿಸಿದರು.
ರೈತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್
ಮೀಸಲಾತಿ ವಿಚಾರದಲ್ಲಿ ಬಿಜೆಪಿಯಿಂದ ತಮ್ಮ ವಿರುದ್ಧ ಕುರುಬ ಸಮುದಾಯವನ್ನು ಎತ್ತಿಕಟ್ಟುವ ತಂತ್ರ ಹೆಣೆಯಲಾಗಿದೆ. ಇದಕ್ಕೆ ಪ್ರತಿ ತಂತ್ರವಾಗಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ.
ಇದಕ್ಕೆ ರಾಹುಲ್ ಒಪ್ಪಿಗೆ ನೀಡಿದ್ದು, ಪಕ್ಷಕ್ಕೆ ಒಳಿತಾಗುವ ಯಾವುದೇ ಸಮಾವೇಶ ನಡೆಸಲು ಅನುಮತಿ ಇರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಅಹಿಂದ ಸಮಾವೇಶಕ್ಕೆ ಸಿದ್ದರಾಮಯ್ಯ ವೇದಿಕೆ ಸಜ್ಜು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.