alex Certify ‘ಆಕಾಂಕ್ಷಾ’ ಪೋರ್ಟಲ್ ಗೆ ಸಿಎಂ ಯಡಿಯೂರಪ್ಪ ಚಾಲನೆ; ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಕಾಂಕ್ಷಾ’ ಪೋರ್ಟಲ್ ಗೆ ಸಿಎಂ ಯಡಿಯೂರಪ್ಪ ಚಾಲನೆ; ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ಕೋವಿಡ್ ನಿರ್ವಹಣೆ ಪೂರಕವಾದ ದೇಶದ ಮೊದಲ ಸಿಎಸ್ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ’ಆಕಾಂಕ್ಷಾ’ ಪೋರ್ಟಲ್ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ, ರಾಜ್ಯಮಟ್ಟದಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಯೋಜನೆಗಳನ್ನು ಸುಗಮವಾಗಿ ಮುಂದುವರೆಸಲು ಸರ್ಕಾರ ಮತ್ತು ದಾನಿಗಳ ನಡುವೆ ಪಾರದರ್ಶಕ ಸೇತುವೆಯಾಗಿ ಈ ಪೋರ್ಟಲ್ ಕಾರ್ಯನಿರ್ವಹಿಸಲಿದೆ. ಕೊರೋನಾ ಸಂಕಷ್ಟಕ್ಕೆ ನೆರವಾಗಲು ಬಯಸುವವರು ಹಾಗೂ ಇತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೆರವು ನೀಡಲು ಇಚ್ಛಿಸುವ ದಾನಿಗಳು ಆಕಾಂಕ್ಷಾ ಪೋರ್ಟಲ್ ಮೂಲಕ ನೆರವು ನೀಡಬಹುದಾಗಿದೆ ಎಂದು ತಿಳಿಸಿದರು.

ನೆಟ್ಟಿಗನ ಕುಚೇಷ್ಟೆ ಪ್ರಶ್ನೆಗೆ ಮುಂಬೈ ಪೊಲೀಸರಿಂದ ಖಡಕ್ ಪ್ರತಿಕ್ರಿಯೆ

ಈಗಾಗಲೇ ಆರೋಗ್ಯ ವಲಯಕ್ಕೆ 175 ಕೋಟಿ ಸಿಎಸ್ಆರ್ ನಿಧಿಯನ್ನು ಸಂಗ್ರಹಿಸಲಾಗಿದೆ. ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯು ಎನ್ ಡಿ ಪಿ ಯು ಈ ಪೋರ್ಟಲ್ ಸೃಜನೆಯಲ್ಲಿ ನೆರವು ನೀಡಿದ್ದು, ಈ ಪೋರ್ಟಲ್ ನಲ್ಲಿ ಸುಲಭವಾಗಿ ಹಾಗೂ ಪಾರದರ್ಶಕವಾಗಿ ಸಿ ಎಸ್ ಆರ್ ಅನುದಾನ ಬಳಕೆಗೆ ಅನುವು ಮಾಡಿ ಕೊಡಲಾಗಿದೆ.

ವಿಶ್ವಸಂಸ್ಥೆಯು ನಿಗದಿಪಡಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗಾಗಿ ವಿಷನ್-2030ನ್ನು ತಯಾರಿಸಲಾಗಿದೆ. ಇದಕ್ಕಾಗಿ ಬೇಡಿಕೆ ಇರುವ 75 ಸಾವಿರ ಕೋಟಿ ರೂ. ಅನುದಾನದ ಪೈಕಿ 61,000 ಕೋಟಿ ರೂ. ಗಳನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಕಳೆದ ಸಾಲಿನಲ್ಲಿ ಆರೋಗ್ಯ ವಲಯದ ಚಟುವಟಿಕೆಗಳಿಗೆ 11,527 ಕೋಟಿ ರೂ. ವೆಚ್ಚ ಮಾಡಿದ್ದು, ಪ್ರಸಕ್ತ ಸಾಲಿಗೆ 11,650 ಕೋಟಿ ರೂ. ಒದಗಿಸಲಾಗಿದೆ ಎಂದರು.

ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಬೈಕ್‌ ಖರೀದಿಸಲು ಮುಂದಾಗಿದ್ದೀರಾ…? ಹಾಗಾದ್ರೆ ಈ ಮಾಡೆಲ್‌ ಗಳನ್ನೊಮ್ಮೆ ನೋಡಿ

ರಾಜ್ಯದಲ್ಲಿ ಕೊರೊನಾ ಲಾಕ್ ಡೌನ್ ಸಂಕಷ್ಟಕ್ಕೀಡಾದವರಿಗೆ 1250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಘೋಷಿಸಲಾಗಿದೆ. 2.06 ಲಕ್ಷ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗಿದ್ದು, 956 ಕೋಟಿ ರೂ. ವೆಚ್ಚ ಭರಿಸಲಾಗುತ್ತಿದೆ ಎಂದು ವಿವರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...