alex Certify ಆಟವಾಡುತ್ತಾ ಲಿಫ್ಟ್ ಗುಂಡಿಗೆ ಬಿದ್ದ ಮಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುತ್ತಾ ಲಿಫ್ಟ್ ಗುಂಡಿಗೆ ಬಿದ್ದ ಮಗು

ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಮಗು ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೋಡಿಪಾಳ್ಯದಲ್ಲಿ ನಡೆದಿದೆ.

2 ವರ್ಷದ ವಿನೋದ್ ಮೃತಪಟ್ಟ ಮಗು. ಕೋಡಿಪಾಳ್ಯದಲ್ಲಿ ರಮೇಶ್ ಎಂಬುವರಿಗೆ ಸೇರಿದ ನಾಲ್ಕು ಅಂತಸ್ಥಿನ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿತ್ತು. ಈ ವೇಳೆ ಆಟವಾಡುತ್ತಿದ್ದ 2 ವರ್ಷದ ವಿನೋದ್ ಲಿಫ್ಟ್ ಗುಂಡಿಯೊಳಗೆ ಬಿದ್ದಿದ್ದಾನೆ. ಮಗುವನ್ನು ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಮಗು ಅಷ್ಟರಲ್ಲೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಮೃತ ಬಾಲಕ ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...