ಬೆಂಗಳೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಯಸ್ಕರರು, ಮಧ್ಯವಯಸ್ಕರರು ಕೂಡ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ 20-45 ವರ್ಷದ ಒಳಗಿನ 2000ಕ್ಕೂ ಅಧಿಕ ಜನ ಮಾಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ಒಂದರಲ್ಲೇ ಐನೂರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಶೇ.20ರಷ್ಟು ವಯಸ್ಕರರು, ಮಧ್ಯವಯಸ್ಕರರು ಸೋಂಕಿಗೆ ಬಲಿಯಾಗುತ್ತಿರುವುದು ಆತಂಕದ ವಿಚಾರ ಎಂದಿದ್ದಾರೆ.
60 ವರ್ಷ ಮೇಲ್ಪಟ್ಟವರು ಮಾತ್ರವಲ್ಲ ಬೇರೆ ಕಾಯಿಲೆಗಳಿಂದ ಬಳಲುತ್ತಿರುವವರು ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಕ್ಕೆ ಅಪಾಯವಾಗಲಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಈ ಸೋಂಕು ಹೆಚ್ಚು ಕಂಡುಬರುತ್ತಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.