alex Certify ಆತ್ಮವಂಚಕ, ಎಡಬಿಡಂಗಿತನದ ರಾಜಕಾರಣಿಯಿಂದ ಪಾಠ ಕಲಿಯಬೇಕಿಲ್ಲ: ವಿಪಕ್ಷ ನಾಯಕನಿಗೆ ಮಾಜಿ ಸಿಎಂ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮವಂಚಕ, ಎಡಬಿಡಂಗಿತನದ ರಾಜಕಾರಣಿಯಿಂದ ಪಾಠ ಕಲಿಯಬೇಕಿಲ್ಲ: ವಿಪಕ್ಷ ನಾಯಕನಿಗೆ ಮಾಜಿ ಸಿಎಂ ತಿರುಗೇಟು

ಬೆಂಗಳೂರು: ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಜಿಗಿದ ಸಿದ್ದರಾಮಯ್ಯ ಅವರು ಜೆಡಿಎಸ್ ಅವಕಾಶವಾದಿ ಪಕ್ಷ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜ ಬಣ್ಣ ಬಯಲು ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿ ಕಿಡಿಕಾರಿರುವ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ, ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯನವರ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ. ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡ ಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಚಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ದೇವೇಗೌಡರ ಸ್ವಾಭಿಮಾನ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ನಿಮ್ಮಂತಹ ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...