ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಫ್ರೊಫೆಸರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಕೋಲೇಔಟ್ ನಲ್ಲಿ ನಡೆದಿದೆ.
ನಿವೃತ್ತ ಫ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಅಶೋಕ್ ಕುಮಾರ್ ತಮ್ಮ ನಿವಾಸದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ಮೈಕೋಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ