ಮಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಖ್ಯಾತ ನಿರೂಪಕಿ ಅನುಶ್ರೀ ಅವರ ಸಿಸಿಬಿ ವಿಚಾರಣೆ ಮುಕ್ತಾಯಗೊಂಡಿದೆ.
ಮೂರುವರೆ ಗಂಟೆಗಳ ವಿಚಾರಣೆ ಬಳಿಕ ಹೊರ ಬಂದ ನಿರೂಪಕಿ ಅನುಶ್ರೀ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಪ್ರಕರಣದಲ್ಲಿ ಬಂಧಿತನಾಗಿರುವ ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ. ತರುಣ್ ನನಗೆ ಡಾನ್ಸ್ ಕೊರಿಯೋಗ್ರಾಫರ್ ಆಗಿದ್ದ ಎಂದು ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ತರುಣ್ ನ ವ್ಯವಹಾರಗಳ ಬಗ್ಗೆಯೂ ನನಗೆ ಗೊತ್ತಿಲ್ಲ. ಇನ್ನು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬಹುದೊಡ್ಡ ಪಿಡುಗು. ನಾನು ಸಿಸಿಬಿ ವಿಚಾರಣೆಗೆ ಸಹಕಾರ ನೀಡುತ್ತೇನೆ. ಸಿಸಿಬಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ.