alex Certify ‘ಆನ್ ಲೈನ್ ಶಿಕ್ಷಣ’ ಕುರಿತಂತೆ ನ್ಯಾಯಾಲಯದಿಂದ ಇಂದು ಹೊರ ಬೀಳಲಿದೆ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆನ್ ಲೈನ್ ಶಿಕ್ಷಣ’ ಕುರಿತಂತೆ ನ್ಯಾಯಾಲಯದಿಂದ ಇಂದು ಹೊರ ಬೀಳಲಿದೆ ಮಹತ್ವದ ತೀರ್ಪು

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಹೀಗಾಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಶಿಕ್ಷಣ ನೀಡಲು ಮುಂದಾಗಿದ್ದು, ಇದಕ್ಕೆ ಪರ – ವಿರೋಧದ ಅಭಿಪ್ರಾಯಗಳು ಕೇಳಿಬರುತ್ತಿವೆ.

ಇದರ ಮಧ್ಯೆ ರಾಜ್ಯ ಸರ್ಕಾರ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವುದಕ್ಕೆ ಕಡಿವಾಣ ಹಾಕಿತ್ತು. ಆದರೆ ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು ವಾದ-ವಿವಾದ ಪೂರ್ಣಗೊಂಡಿತ್ತು.

ಹೀಗಾಗಿ ನ್ಯಾಯಾಲಯ ಮಂಗಳವಾರದಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತಾದರೂ ಸಮಯಾವಕಾಶದ ಕೊರತೆ ಕಾರಣ ಇದನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ಆನ್ ಲೈನ್ ಶಿಕ್ಷಣ ನೀಡುವ ಕುರಿತಂತೆ ನ್ಯಾಯಾಲಯದಿಂದ ಮಹತ್ವದ ತೀರ್ಮಾನ ಹೊರಬೀಳುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...