ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾಗಿದ್ದ ಮೆಕ್ಕೆಜೋಳ ಬೆಳೆಗಾರರ ನೆರವಿಗೆ ಧಾವಿಸಿದ್ದ ರಾಜ್ಯ ಸರ್ಕಾರ, ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿತ್ತು. ಈ ಆರ್ಥಿಕ ನೆರವಿನ ಪ್ಯಾಕೇಜ್ ಪಡೆಯುವ ಕುರಿತಂತೆ ಮೆಕ್ಕೆಜೋಳ ಬೆಳೆಗಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ.
ಮೆಕ್ಕೆಜೋಳ ಬೆಳೆಗಾರರು ಜೂನ್ 25 ರೊಳಗೆ ಅರ್ಜಿ ಸಲ್ಲಿಸಬೇಕಾಗಿದ್ದು, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಯನ್ನು ಈ ಸಂದರ್ಭದಲ್ಲಿ ನೀಡಬೇಕಾಗುತ್ತದೆ. ಒಂದೊಮ್ಮೆ ಬೆಳೆಗಾರರ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾಗಿರದಿದ್ದರೆ ಅಂತಹ ಮೆಕ್ಕೆಜೋಳ ಬೆಳೆಗಾರರು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಕ್ಕೆ ಜೂನ್ 25 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಿದೆ.
ಜಂಟಿ ಖಾತೆ ಆಗಿದ್ದಲ್ಲಿ ಅಂತಹ ಮೆಕ್ಕೆಜೋಳ ಬೆಳೆಗಾರರು ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದು ನೋಟರಿ ಅವರಿಂದ ದೃಢೀಕರಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕಿದೆ. ಒಂದೊಮ್ಮೆ ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನಿದ್ದು, ಅವರು ಮರಣ ಹೊಂದಿದ್ದ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗರಿಂದ ಮರಣ ಪ್ರಮಾಣಪತ್ರ ಪಡೆದು ಕುಟುಂಬದ ಇತರ ಸದಸ್ಯರ ನಿರಾಕ್ಷೇಪಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕಿದೆ.