alex Certify ಆರ್.ಆರ್. ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್.ಆರ್. ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಕುರಿತು ಇಲ್ಲಿದೆ ಮಾಹಿತಿ

ರಾಜರಾಜೇಶ್ವರಿನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಕಣಕ್ಕಿಳಿದಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಕುಸುಮಾ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಗುತ್ತಿಗೆದಾರರಾಗಿರುವ ಹನುಮಂತರಾಯಪ್ಪನವರ ಪುತ್ರಿ ಕುಸುಮಾ 1989 ರ ಜೂನ್ 6 ರಂದು ಜನಿಸಿದ್ದು, ಬೆಂಗಳೂರಿನ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಹತ್ತನೇ ತರಗತಿವರೆಗೆ, ರಾಜಾಜಿನಗರದ ಕೆಎಲ್ಇ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ ಬಳಿಕ ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದಿದ್ದಾರೆ.

ಐಎಎಸ್ ಅಧಿಕಾರಿ ಡಿಕೆ ರವಿ ರವಿ ಅವರನ್ನು ವಿವಾಹವಾಗಿದ್ದ ಕುಸುಮಾ, ಪತಿ ಸಾವಿನ ಬಳಿಕ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಾಗೆ ತೆರಳಿದ್ದು ಅಲ್ಲಿನ ಬಾಸ್ಟನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಕುಸುಮಾ ಅವರು ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...