ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 3000 ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದ್ದು, ರಾಜ್ಯದ 40 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಇದರ ಪ್ರಯೋಜನ ಪಡೆಯಲಿದ್ದಾರೆ.
ಈಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗುವ ನಿಟ್ಟಿನಲ್ಲಿ ಜಿಲ್ಲಾವಾರು ಸಹಕಾರ ಸಂಘ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.