
ಕಾಲಿಗೆ ಗಾಯ ಮಾಡಿಕೊಂಡಿದ್ದ ಮಂಗವೊಂದು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಂಡು ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.
ಶುಕ್ರವಾರದಂದು ಈ ಘಟನೆ ನಡೆದಿದ್ದು, ದಾಂಡೇಲಿ ನಗರದ ಪಾಟೀಲ್ ಆಸ್ಪತ್ರೆಯ ಬಾಗಿಲಿಗೆ ಬಂದು ಈ ಮಂಗ ಕುಳಿತಾಗ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಗಾಬರಿಯಾಗಿದ್ದಾರೆ.
ಇದನ್ನು ಓಡಿಸಲು ಕೆಲವರು ಪ್ರಯತ್ನಪಟ್ಟರಾದರೂ ಮಂಗ ತನ್ನದೇ ಆದ ರೀತಿಯಲ್ಲಿ ಸಮಸ್ಯೆ ಹೇಳಲು ಪ್ರಯತ್ನಪಟ್ಟಿದೆ. ಸ್ವಲ್ಪ ಹೊತ್ತಿನ ಬಳಿಕ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಂಗನ ಕಾಲಿಗೆ ಗಾಯವಾಗಿರುವುದನ್ನು ಗಮನಿಸಿದ್ದಾರೆ. ಬಳಿಕ ಕಾಲಿಗೆ ಮುಲಾಮು ಹಚ್ಚಿದ್ದು, ನಂತರ ಮಂಗ ಯಾವುದೇ ತಕರಾರು ಮಾಡದೆ ಅಲ್ಲಿಂದ ತೆರಳಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.