alex Certify ಆಹ್ವಾನ ನೀಡದ್ದಕ್ಕೆ ಪ್ರತಿಭಟಿಸಿ ಧಿಕ್ಕಾರ ಕೂಗಿದ ಕಾಂಗ್ರೆಸ್ – ಜೆಡಿಎಸ್ ಸದಸ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಹ್ವಾನ ನೀಡದ್ದಕ್ಕೆ ಪ್ರತಿಭಟಿಸಿ ಧಿಕ್ಕಾರ ಕೂಗಿದ ಕಾಂಗ್ರೆಸ್ – ಜೆಡಿಎಸ್ ಸದಸ್ಯರು

ಶಿವಮೊಗ್ಗ ಸ್ಮಾರ್ಟ್ ಸಿಟಿ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಾಲಿಕೆ ಸದಸ್ಯರು ಇಂದು ಸಮಾರಂಭದ ಕೊಠಡಿಯಲ್ಲಿಯೇ ದಿಢೀರ್ ಪ್ರತಿಭಟನೆ ನಡೆಸಿದರು.

ಸ್ಮಾರ್ಟ್ ಸಿಟಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕೇವಲ ಬಿಜೆಪಿ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ತಮ್ಮನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಅವರುಗಳನ್ನು ಒಳಕ್ಕೆ ಬಿಡಲಿಲ್ಲ.

ಪೊಲೀಸರು ಮತ್ತು ಜಿಲ್ಲಾಧಿಕಾರಿಗಳ ನಡುವೆ ಮಾತುಕತೆ ನಡೆದ ನಂತರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಯಿತು.
ಆದರೂ ಕೂಡ ಸದಸ್ಯರು ಸಭಾಂಗಣದ ನೆಲದ ಮೇಲೆಯೇ ಕುಳಿತು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಮತ್ತು ಪೊಲೀಸರು ಪ್ರತಿಭಟನಾಕಾರರನ್ನು ಶಾಂತಗೊಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...