ದಾವಣಗೆರೆ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿರುವ ಸಾರಿಗೆ ನೌಕರರ ಅಹವಾಲು ಸ್ವೀಕರಿಸಿದ ಎಂ.ಪಿ.ರೇಣುಕಾಚಾರ್ಯ, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾರಿಗೆ ನೌಕರರ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ರೇಣುಕಾಚಾರ್ಯ, ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ 420. ಆತ ಕಾಂಗ್ರೆಸ್ ಏಜೆಂಟ್ ಇದ್ದಂತೆ. ಆತನನ್ನು ಬಿಟ್ಟು ಮಾತುಕತೆಗೆ ಬನ್ನಿ. ನಾನು ನಿಮ್ಮ ಪರವಾಗಿ ನಿಂತು ಸಿಎಂ ಬಳಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಸಾರಿಗೆ ಮುಷ್ಕರದಿಂದ ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದಾರೆ. ಕೊರೊನಾದಂತಹ ಸಂದರ್ಭದಲ್ಲಿ ಇಂತಹ ಮುಷ್ಕರ ಬೇಡ. ಪ್ರಯಾಣಿಕರ ನೋವನ್ನು ಅರಿತು ಕರ್ತವ್ಯಕ್ಕೆ ಹಾಜರಾಗಿ. 6ನೇ ವೇತನ ಆಯೋಗ ಸೇರಿದಂತೆ ಸಾರಿಗೆ ನೌಕರರ ಸಿಬ್ಬಂದಿಗಳ ಬೇಡಿಕೆ ಈಡೇರಿಸುವ ಬಗ್ಗೆ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.