ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರದಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಲು ಕೆಲವರು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳ ನಡುವೆ ನಡೆದಿರುವ ಈ ಭೇಟಿ ಸಹಜವಾಗಿಯೇ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದ್ದು, ಒಂದೊಮ್ಮೆ ಸಂಕಷ್ಟಕರ ಪರಿಸ್ಥಿತಿ ಎದುರಾದರೆ ಯಡಿಯೂರಪ್ಪನವರ ಬೆನ್ನಿಗೆ ಜೆಡಿಎಸ್ ನಿಲ್ಲಲಿದೆಯಾ ಎಂಬ ಪ್ರಶ್ನೆ ಮೂಡಿದೆ.
ತಮ್ಮ ಭೇಟಿ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿರುವ ಕುಮಾರಸ್ವಾಮಿ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದೆ ಎಂದು ಹೇಳಿರುವುರಾದರೂ ಈ ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆಗಳು ಸಹ ನಡೆದಿವೆ ಎಂದು ಮೂಲಗಳು ಹೇಳುತ್ತಿವೆ.