ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಆ ಸಚಿವ ಈಗ ರಾಜೀನಾಮೆ ಕೊಟ್ಟಿದ್ದಾನೆ. ಆದರೆ ಅವರ ಸಹೋದರ ಸಿಎಂ ಯಡಿಯೂರಪ್ಪನವರಿಗೆ ಬೆದರಿಕೆ ಹಾಕುತ್ತಿದ್ದಾರಂತೆ ಎಂದು ಇಂಥ ಸರ್ಕಾರ ನಮಗೆ ಬೇಕಾ ಎಂದು ಕಿಡಿಕಾರಿದ್ದಾರೆ.
ದೇವನಹಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆ ಸಚಿವನ ಸಿಡಿ ನೋಡುವುದಕ್ಕೆ ನನಗೆ ಅಸಹ್ಯವಾಗುತ್ತೆ. ಹೇಳುವುದಕ್ಕೂ ನಾಚಿಕೆಯಾಗುತ್ತೆ. ಈಗ ಆ ಸಚಿವ ರಾಜೀನಾಮೆ ಕೊಟ್ಟಿದ್ದಾನಂತೆ. ಆದರೆ ಆತನ ಸಹೋದರ ಸಿಎಂ ಬಳಿ ನಮ್ಮ ಅಣ್ಣನ ರಾಜೀನಾಮೆ ಪಡೆದುಕೊಂಡ್ರೆ ನಿಮ್ಮ ಸಿಡಿ ರಿಲೀಸ್ ಮಾಡ್ತೀನಿ ಎಂದು ಹೇಳ್ತಾನಂತೆ. ಇಂಥ ಮಾನಗೆಟ್ಟ ಸರ್ಕಾರ ಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ
ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ.