ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೆ ಬರಲಿದ್ದು, 9 ದಿನಗಳ ಕಾಲ ಕರ್ನಾಟಕ ರಾತ್ರಿ ಸ್ತಬ್ಧಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾತ್ರಿ 10ಗಂಟೆಯೊಳಗೆ ಎಲ್ಲಾ ಚಟುವಟಿಕೆಗಳನ್ನು ಮುಗಿಸಿ ಮನೆ ಸೇರಿಕೊಳ್ಳುವಂತೆ ಸಚಿವ ಸುಧಾಕರ್ ತಿಳಿಸಿದ್ದಾರೆ.
ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದು, ಈ ಸಂದರ್ಭದಲ್ಲಿ ಏನೆಲ್ಲಾ ಲಭ್ಯವಿರಲಿದೆ ಏನೆಲ್ಲಾ ಲಭ್ಯವಿರಲ್ಲ ಎಂಬ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.
ನೈಟ್ ಕರ್ಫ್ಯೂ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಅಗತ್ಯ ಸೇವೆಗಳಾದ ಆರೋಗ್ಯ ಸೇವೆ, ಮೆಡಿಕಲ್ ಸ್ಟೋರ್, ಹಾಲು, ತರಕಾರಿ ಲಭ್ಯವಿರಲಿದೆ. ರೈಲ್ವೆ ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ.
ಹೋಟೆಲ್, ಬಾರ್, ರೆಸ್ಟೋರೆಂಟ್, ಆಟೋ, ಕ್ಯಾಬ್, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ.