![](https://kannadadunia.com/wp-content/uploads/2020/06/d3bc31fb609a1702c6c7c5c71725b4560c09ad00ef81da84ddf80738b78de728.jpg)
ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ರಾಜ್ಯದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಆ ಬಳಿಕ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಹೀಗಾಗಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ಆರಂಭಿಸಲಾಗಿತ್ತು.
ಆದರೆ ಹವಾ ನಿಯಂತ್ರಣ ಬಸ್ ಸಂಚಾರವನ್ನು ಕೆಎಸ್ಆರ್ಟಿಸಿ ಈವರೆಗೆ ಆರಂಭಿಸಿರಲಿಲ್ಲ. ಆದರೆ ಇದೀಗ ಇಂದಿನಿಂದ ಎಸಿ ಬಸ್ ಸಂಚಾರ ಆರಂಭಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮ ಮುಂದಾಗಿದೆ.
ಗುರುವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಿಂದ ಮೈಸೂರು, ಮಂಗಳೂರು, ಕುಂದಾಪುರ, ಚಿಕ್ಕಮಗಳೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಸಿ ಬಸ್ ಗಳು ಸಂಚರಿಸಲಿವೆ.