ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ಇಂದು ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ.
ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘ ಸೇರಿದಂತೆ ಐಕ್ಯ ಹೋರಾಟ ಸಮೀತಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರೀತ ಕೃಷಿ ಕಾರ್ಮಿಕರ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಹಸಿರು ಸೇನೆ, ದಲಿತ ಸಂಘಟನೆಗಳು, ಆಶಾಕಾರ್ಯಕರ್ತೆಯರ ಸಂಘ, ಕನ್ನಡಪರ ಸಂಘಟನೆಗಳು, ಓಲಾ-ಊಬರ್ ಚಾಲಕರ ಸಂಘ, ಬೀದಿಬದಿ ವ್ಯಾಪಾರಸ್ತರ ಸಂಘಟನೆ, ಆಟೋ ಚಾಲಕರ ಸಂಘಟನೆ ಸೇರಿದಂತೆ 33ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆ ಇದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲಿದ್ದು, ಪ್ರಮುಖವಾಗಿ ಟೌನ್ ಹಾಲ್, ರೈಲ್ವೆ ಸ್ಟೇಷನ್, ಮೈಸೂರು ಬ್ಯಾಂಕ್ ವೃತ್ತಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಮುಂದಾಗಿವೆ. ಈ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಯಾವ ಸೇವೆಗಳು ಲಭ್ಯ….?
ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ದಿನಸಿ ಅಂಗಡಿಗಳು ತೆರೆದಿರಲಿವೆ, ಆಸ್ಪತ್ರೆ, ಔಷಧ ಅಂಗಡಿ, ಪೆಟ್ರೋಲ್ ಬಂಕ್ ಗಳ ಸೇವೆ ಲಭ್ಯ, ಹೋಟೆಲ್, ಮಧ್ಯದಂಗಡಿ, ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ, ಮೆಟ್ರೋ, ರೈಲು, ವಿಮಾನ ಸಂಚಾರ.
ಯಾವ ಸೇವೆಗಳು ಅಲಭ್ಯ….?
ಓಲಾ-ಊಬರ್, ಆಟೋ-ಟ್ಯಾಕ್ಸಿ ಸಂಚಾರ ಇರುವುದಿಲ್ಲ, ಖಾಸಗಿ ಬಸ್, ಲಾರಿ ಸಂಚಾರ ಸಂಪೂರ್ಣ ಸ್ಥಗಿತ. ಬೀದಿಬದಿ ವ್ಯಾಪಾರ, ಅಂಗಡಿ ಮುಂಗಟ್ಟುಗಳು ಬಂದ್, ಮಾಲ್ ಗಳು ಬಂದ್