ಕಳೆದ ಐದು ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಇಂದು ವಿನೂತನ ಪ್ರತಿಭಟನೆಗೆ ಮುಂದಾಗಿದ್ದು, ತಟ್ಟೆ ಲೋಟ ಬಡಿಯುವುದರ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ. ಪ್ರತಿಭಟನಾನಿರತ ಸಾರಿಗೆ ಸಂಸ್ಥೆ ನೌಕರರ ಕುಟುಂಬಸ್ಥರು ಸಹ ಇದರಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾದರೂ ಸಹ ಅದನ್ನು ಲೆಕ್ಕಿಸದೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಆರನೇ ವೇತನ ಜಾರಿಯಾಗುವವರೆಗೂ ಮುಷ್ಕರ ಮುಂದುವರೆಸಲು ತೀರ್ಮಾನಿಸಲಾಗಿದೆ.
ಗಮನಿಸಿ…! ನಿಮ್ಮ ಹೆಸರಲ್ಲೇ ಖಾತೆ ತೆರೆಯುವ ಹೊಸ ವಂಚನೆ ಬಗ್ಗೆ ಬ್ಯಾಂಕ್ ಗ್ರಾಹಕರಿಗೆ SBI ಎಚ್ಚರಿಕೆ
ಸರ್ಕಾರ ಹಾಗೂ ಸಾರಿಗೆ ಸಂಸ್ಥೆ ನೌಕರರ ಹಗ್ಗಜಗ್ಗಾಟದ ನಡುವೆ ಜನಸಾಮಾನ್ಯರು ಹೈರಾಣಾಗಿದ್ದು, ಹಬ್ಬದ ಸಂದರ್ಭದಲ್ಲಿ ಊರಿಗೆ ಹೋಗಲು ಪರದಾಡುತ್ತಿದ್ದಾರೆ. ಅಲ್ಲದೆ ಪ್ರತಿನಿತ್ಯ ಕೆಲಸಕ್ಕೆ ಹಾಜರಾಗಲು ಸಹ ತೊಂದರೆಯಾಗುತ್ತಿದ್ದು, ಹೀಗಾಗಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡು ಬಸ್ ಸಂಚಾರ ಆರಂಭವಾದರೆ ಒಳಿತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.