ಬೆಂಗಳೂರು: ಇವತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನುವ ವದಂತಿ ಹರಡಿದೆ.
ಆದರೆ, ಯಾವುದೇ ಲಾಕ್ಡೌನ್ ಘೋಷಣೆ ಮಾಡುವ ಸಾಧ್ಯತೆ ಇಲ್ಲ. ಕೊರೋನಾ ಸೋಂಕು ನಿಯಂತ್ರಣ ಕುರಿತಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ವೆಂಟಿಲೇಟರ್, ಬೆಡ್, ಕೊರೋನಾ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಈಗಾಗಲೇ ಸರ್ಕಾರ ನಿರ್ಧರಿಸಿರುವಂತೆ ಮತ್ತೆ ಲಾಕ್ ಡೌನ್ ಜಾರಿ ಮಾಡಲ್ಲ. ಯಾವುದೇ ಹೊಸ ನಿಯಮ, ಕಠಿಣ ನಿಯಮಗಳ ಜಾರಿ ಮಾಡುವುದಿಲ್ಲ ಎಂದು ಹೇಳಲಾಗಿದೆ.