alex Certify ಇಡಗುಂಜಿ ಗಣಪಗೆ ಶರಣು ಎನ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಡಗುಂಜಿ ಗಣಪಗೆ ಶರಣು ಎನ್ನಿ

ಗಣನಾಯಕನ ಕುರಿತ ಹಾಡುಗಳಲ್ಲೂ ಕಾಣಿಸಿಕೊಳ್ಳುವ ಇಡಗುಂಜಿ ಗಣಪತಿ, ಬೇಡಿದ ಭಕ್ತರಿಗೆ ಸರ್ವವನ್ನು ಒದಗಿಸುವ ಮಹಾಶಕ್ತಿ. ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿರುವ ಇದು ಸುಮಾರು 1500 ವರ್ಷಕ್ಕೂ ಹೆಚ್ಚಿನ ಇತಿಹಾಸ ಹೊಂದಿದೆ.

ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ರಾ.ಹೆ. 66 (ರಾ.ಹೆ.17)ರಿಂದ 7 ಕಿ.ಮೀ. ದೂರದಲ್ಲಿ ಪೂರ್ವ ದಿಕ್ಕಿನಲ್ಲಿ ಇದೆ. ಇಲ್ಲಿ ನೆಲೆಸಿರುವ ಗಣಪನ ರೂಪವನ್ನು “ಮಹೋತಭಾರ ಶ್ರೀ ವಿನಾಯಕ” ದೇವರು ಎಂದು ಕರೆಯುತ್ತಾರೆ. ಈ ದೇವಸ್ಥಾನದಲ್ಲಿ ವಿನಾಯಕ ಮೂರ್ತಿಯು ನಿಂತಿರುವ “ದ್ವಿ ಭುಜ” ಭಂಗಿಯಲ್ಲಿ ಸುಮಾರು 88 ಸೆ.ಮೀ. ಎತ್ತರ ಮತ್ತು 59 ಸೆ.ಮೀ. ಅಗಲವಿದೆ.

ಮೂರ್ತಿಯ ಬಲ ಕೈಯಲ್ಲಿ ಕಮಲದ ಹೂ ಮತ್ತು ಎಡ ಕೈಯಲ್ಲಿ ಮೋದಕವನ್ನು ಹೊಂದಿದೆ. ಅಚ್ಚರಿಯೆಂದರೆ ಗಣಪತಿಯ ವಾಹನ ಮೂಷಿಕ (ಇಲಿ)ನನ್ನು ಇಲ್ಲಿ ಮೂರ್ತಿಯ ಪಕ್ಕದಲ್ಲಿ ನೋಡಲು ಸಿಗುವುದಿಲ್ಲ.

ಮುಂಜಾನೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಮತ್ತು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8.30 ರ ತನಕ ದರ್ಶನಕ್ಕೆ ಅವಕಾಶವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...