ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ವಿಶೇಷ ಕೋರ್ಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ.
ಯುವತಿ ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಕಂಗಾಲಾದ ರಮೇಶ್ ಜಾರಕಿಹೊಳಿ ಗೋಕಾಕ್ ನ ತಮ್ಮ ನಿವಾಸ ಸೇರಿದ್ದರು. ಬೆಳಗಾವಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ ವೇಳೆ ಸ್ವತ: ಸಿಎಂ ಉಪಸ್ಥಿತರಿದ್ದರೂ ಕೂಡ ಜಾರಕಿಹೊಳಿ ಸುಳಿವಿರಲಿಲ್ಲ.
ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗದೇ ವಿಶೇಷ ಕೋರ್ಟ್ ಮುಂದೆ ಹಾಜರಾದ ಸಿಡಿ ಲೇಡಿ
ಮಧ್ಯಾಹ್ನ 3 ಗಂಟೆ ಬಳಿಕ ಮನೆಯಿಂದ ಹೊರ ಬಂದ ಸಾಹುಕಾರ್, ಕೊಲ್ಹಾಪುರ ಮಹಾಲಕ್ಷ್ಮಿ ದೇವಾಲಯಕ್ಕೆ ತೆರಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.