ಈಗಾಗಲೇ ಅಂಚೆ ಕಚೇರಿಗಳಲ್ಲಿ ಉಳಿತಾಯ ಖಾತೆ, ಸುಕನ್ಯಾ ಸಮೃದ್ಧಿ ಖಾತೆ ಸೇರಿದಂತೆ ಹಲವು ಸೇವೆಗಳು ಲಭ್ಯವಿದ್ದು, ಇದೀಗ ಗ್ರಾಮೀಣ ಭಾಗದ ಅಂಚೆ ಕಚೇರಿಗಳಲ್ಲಿ ಮತ್ತಷ್ಟು ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ.
ಹಿರಿಯ ನಾಗರಿಕರ ಉಳಿತಾಯ ಯೋಜನೆ, ಪಿಪಿಎಫ್, ರಾಷ್ಟ್ರೀಯ ಉಳಿತಾಯ ಯೋಜನೆಯ ಪ್ರಮಾಣ ಪತ್ರ ಸೇವೆಗಳನ್ನು ಆರಂಭಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿರುವ ದೇಶದ 1.31 ಕೋಟಿ ಅಂಚೆ ಕಚೇರಿಗಳಲ್ಲಿ ಈ ಸೇವೆಗಳು ಸಿಗಲಿವೆ.
ಈ ಸೇವೆಗಳು ಈವರೆಗೆ ನಗರ ಪ್ರದೇಶದ ಅಂಚೆ ಕಚೇರಿಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನತೆ ಹೂಡಿಕೆ ಮಾಡಲು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.