ತುಮಕೂರು: ಉಪ ಚುನಾವಣೆಗೂ ಮೊದಲು ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಾಕಿರುವ ಸವಾಲಿನ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಶಿರಾ ಉಪ ಚುನಾವಣಾ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ. ನನ್ನ ಮಾತಲ್ಲಿ ಯಾವುದೇ ಸುಳ್ಳಿರಲ್ಲ. ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಯಲ್ಲಿ ಮತದಾರರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದರು.
ಸಿದ್ದರಾಮಯ್ಯನವರು ನನ್ನ ವಿರುದ್ಧ ಮಾಡುತ್ತಿರುವ ಎಲ್ಲಾ ಆರೋಪಕ್ಕೂ ಮತದಾರರು ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದರು. ಅಲ್ಲದೇ ಸಿದ್ದರಾಮಯ್ಯನವರೇ, ಇನ್ಮುಂದೆ ಯಾವುದೇ ಚುನಾವಣೆಗಳಲ್ಲಿ ನಿಮ್ಮ ಪಕ್ಷ ಗೆಲ್ಲಲು ಬಿಡುವುದಿಲ್ಲ ಎಂದು ಹೇಳುವ ಮೂಲಕ ಸವಾಲು ಹಾಕಿದ್ದರು.
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.