ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 184 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 250 ಮಂದಿ ಗುಣಮುಖರಾಗಿದ್ದು, ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ 1650 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 129 ಮಂದಿ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 96 ಮಂದಿ ಕೋವಿಡ್ ಆರೈಕೆ ಕೇಂದ್ರದಲ್ಲಿ, 232 ಮಂದಿ ಖಾಸಗಿ ಆಸ್ಪತ್ರೆಯಲ್ಲಿ, 1136 ಮಂದಿ ಮನೆಯಲ್ಲಿಯೇ ಐಸೋಲೇಷನ್‍ಗೆ ಒಳಗಾಗಿದ್ದಾರೆ. 57 ಮಂದಿ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ಶಿವಮೊಗ್ಗ 82, ಭದ್ರಾವತಿ 13, ಶಿಕಾರಿಪುರ 63, ತೀರ್ಥಹಳ್ಳಿ 12, ಸಾಗರ 08, ಹೊಸನಗರ 03, ಸೊರಬ 02 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 319 ಮಂದಿ ಮೃತಪಟ್ಟಿದ್ದಾರೆ. 6828 ಕಂಟೈನ್ಮೆಂಟ್ ಜೋನ್‍ಗಳಿವೆ. 4127 ಕಂಟೈನ್ಮೆಂಟ್ ವಲಯಗಳನ್ನು ಡಿನೋಟಿಫೈಡ್ ಮಾಡಲಾಗಿದೆ.