ಲಾಕ್ಡೌನ್ ಕಾರಣಕ್ಕೆ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಇದೀಗ ಪುನಾರಂಭವಾಗಿದ್ದು, ವಿದ್ಯಾರ್ಥಿಗಳು ಈ ಮೊದಲಿನಂತೆ ಹಾಜರಾಗುತ್ತಿದ್ದಾರೆ. ಪರೀಕ್ಷೆಗಳನ್ನು ಸಹ ನಡೆಸಲಾಗುತ್ತಿದ್ದು, ಹತ್ತನೇ ತರಗತಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಬಾರಿಯ 10ನೇ ತರಗತಿ ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿದ್ದು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.
ಜೂನ್ 21 ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ.
ಜೂನ್ 24ರಂದು ಗಣಿತ.
ಜೂನ್ 28ರಂದು ವಿಜ್ಞಾನ.
ಜೂನ್ 30ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಜುಲೈ 2ರಂದು ದ್ವಿತೀಯ ಭಾಷೆ ಇಂಗ್ಲಿಷ್ / ಕನ್ನಡ.
ಜುಲೈ 5ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.