ಬೆಂಗಳೂರು: ಬಿಹಾರದಲ್ಲಿ ಇವಿಎಂ ದುರ್ಬಳಕೆ ಆರೋಪ ಕೇಳಿಬಂದಿದೆ. ಆರ್.ಆರ್.ನಗರ ಉಪಚುನಾವಣೆಯಲ್ಲಿಯೂ ಇವಿಎಂ ಹ್ಯಾಕ್ ಮಾಡಿರುವ ಸಾಧ್ಯತೆಯಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಇವಿಎಂ ಮಾಡಿರುವುದು ಮನುಷ್ಯರೇ ತಾನೆ. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳುವ ಅವಕಾಶವಿದೆ. ಈ ಬಗ್ಗೆ ಅನುಮಾನಗಳಿವೆ. ಇಲ್ಲವಾದಲ್ಲಿ ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಗೆ ಅಷ್ಟೊಂದು ಮತಗಳ ಅಂತರದ ಸೋಲು ಸಾಧ್ಯವಿಲ್ಲ. ಚುನಾವಣಾ ಆಯೋಗ ಮೂಕಪ್ರೇಕ್ಷನಂತಾಗಿದೆ. ಇದೇ ರೀತಿ ಮುಂದುವರಿದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ ಎಂದು ಕಿಡಿಕಾರಿದರು.
ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ಆರಂಭಿಸಬೇಕು. ಈ ಬಗ್ಗೆ ಎಲ್ಲಾ ಪಕ್ಷಗಳು ಸುಪ್ರೀಂ ಕೋರ್ಟ್ ಗೆ ಪತ್ರ ಅಭಿಯಾನ ಮಾಡಬೇಕು ಎಂದು ಅಗ್ರಹಿಸಿದರು.