ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಅದನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ಇಂತಹುದೊಂದು ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಗ್ರಾಮಾಂತರ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಐವರು ಪೇದೆಗಳು ಇಸ್ಪೀಟ್ ಆಡುತ್ತಿದ್ದು, ಈ ವೇಳೆ ದಾಳಿ ನಡೆಸಿದ ಐಜಿ ಸ್ಕ್ವಾಡ್, ಅವರಿಂದ 29 ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದೆ.
ಪೊಲೀಸ್ ಪೇದೆಗಳಾದ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್ ಹಾಗೂ ಬಾಲರಾಜ್ ಸಿಕ್ಕಿಬಿದ್ದವರಾಗಿದ್ದು, ಇವರುಗಳ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.