alex Certify ಇಸ್ಪೀಟ್ ಆಡುವಾಗಲೇ ಸಿಕ್ಕಿ ಬಿದ್ದ ಪೊಲೀಸರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ಪೀಟ್ ಆಡುವಾಗಲೇ ಸಿಕ್ಕಿ ಬಿದ್ದ ಪೊಲೀಸರು…!

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಅದನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ಇಂತಹುದೊಂದು ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಗ್ರಾಮಾಂತರ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಐವರು ಪೇದೆಗಳು ಇಸ್ಪೀಟ್ ಆಡುತ್ತಿದ್ದು, ಈ ವೇಳೆ ದಾಳಿ ನಡೆಸಿದ ಐಜಿ ಸ್ಕ್ವಾಡ್, ಅವರಿಂದ 29 ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದೆ.

ಪೊಲೀಸ್ ಪೇದೆಗಳಾದ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್ ಹಾಗೂ ಬಾಲರಾಜ್ ಸಿಕ್ಕಿಬಿದ್ದವರಾಗಿದ್ದು, ಇವರುಗಳ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...