ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ನವೆಂಬರ್ 5ರಿಂದ 17ರವರೆಗೆ ಅವಕಾಶ ನಿಡಲಾಗಿದೆ. ಆದರೆ ಈ ಬಾರಿ ಆನ್ ಲೈನ್ ನಲ್ಲಿ ಮಾತ್ರ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕರಿಗೆ ಹಾಸನಾಂಬೆ ದೇವಿಯ ಆನ್ ಲೈನ್ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೆಲವೆಡೆಗಳಲ್ಲಿ ಎಲ್.ಇ.ಡಿ ಪರದೆ ಹಾಕಿ ಸಾಮಾಜಿಕ ಅಂತರ ಸೇರಿದಂತೆ ಹಲವು ಮುಂಜಾಗೃತಾ ಕ್ರಮ ಕೈಗೊಂಡು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.
ಈ ಬಾರಿ ಹಾಸನಾಂಬೆ ಉತ್ಸವ ಸಾಂಪ್ರದಾಯಿಕವಾಗಿ ನಡೆಯಲಿದ್ದು, ಮೊದಲ ದಿನ ನ.5ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆಯುವ ದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಂದ ಉದ್ಘಾಟನೆ ನಡೆಯಲಿದೆ. ಮೊದಲ ಹಾಗೂ ಕೊನೇ ದಿನ ಆಹ್ವಾನಿತರಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.