ಕೊರೊನಾ ಕಾಲೇಜ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ಮಾತ್ರವಲ್ಲದೆ ವಿಶೇಷಚೇತನರು, ದೃಷ್ಟಿ ವಿಶೇಷಚೇತನರು, ಸ್ವಾತಂತ್ರ ಹೋರಾಟಗಾರರ ಪತಿ-ಪತ್ನಿಯವರ ಉಚಿತ ಕೂಪನ್ಸ್ ಮತ್ತು ಅಪಘಾತ ಪರಿಹಾರ ನಿಧಿ ಸೇವೆಗಳಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ https://serviceonline.gov.in/karnataka ಇಲ್ಲಿ ವಿಕಲಚೇತನರ ರಿಯಾಯಿತಿ ದರದ ಹೊಸ, ನವೀಕರಣದ ಬಸ್ ಪಾಸ್ ಅನ್ನು ಫೆಬ್ರವರಿ 28ರೊಳಗೆ ನವೀಕರಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ವೇಳೆ ಸಂಬಂಧಪಟ್ಟ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ. ಅಲ್ಲದೆ ಬಸ್ ಪಾಸ್ ಪಡೆಯುವ ವೇಳೆ ದಾಖಲಾತಿಗಳ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.