alex Certify ಉಚಿತ – ರಿಯಾಯಿತಿ ಬಸ್ ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ – ರಿಯಾಯಿತಿ ಬಸ್ ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಕೊರೊನಾ ಕಾಲೇಜ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಿದೆ.

ವಿದ್ಯಾರ್ಥಿಗಳು ಮಾತ್ರವಲ್ಲದೆ ವಿಶೇಷಚೇತನರು, ದೃಷ್ಟಿ ವಿಶೇಷಚೇತನರು, ಸ್ವಾತಂತ್ರ ಹೋರಾಟಗಾರರ ಪತಿ-ಪತ್ನಿಯವರ ಉಚಿತ ಕೂಪನ್ಸ್ ಮತ್ತು ಅಪಘಾತ ಪರಿಹಾರ ನಿಧಿ ಸೇವೆಗಳಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ https://serviceonline.gov.in/karnataka ಇಲ್ಲಿ ವಿಕಲಚೇತನರ ರಿಯಾಯಿತಿ ದರದ ಹೊಸ, ನವೀಕರಣದ ಬಸ್ ಪಾಸ್ ಅನ್ನು ಫೆಬ್ರವರಿ 28ರೊಳಗೆ ನವೀಕರಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ವೇಳೆ ಸಂಬಂಧಪಟ್ಟ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ. ಅಲ್ಲದೆ ಬಸ್ ಪಾಸ್ ಪಡೆಯುವ ವೇಳೆ ದಾಖಲಾತಿಗಳ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...