alex Certify ಉತ್ತರ ಕನ್ನಡದಲ್ಲಿ ಖಾಕಿ ಪಡೆಗೆ ಕೊರೊನಾಘಾತ; 251 ಪೊಲೀಸರಲ್ಲಿ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕನ್ನಡದಲ್ಲಿ ಖಾಕಿ ಪಡೆಗೆ ಕೊರೊನಾಘಾತ; 251 ಪೊಲೀಸರಲ್ಲಿ ಸೋಂಕು

  • ಕಾರವಾರ: ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ನಲುಗುತ್ತಿದ್ದು, ಈ ನಡುವೆ ಖಾಕಿ ಪಡೆಯಲ್ಲಿ ಕೊರೊನಾ ಸೋಂಕು ಹರಡುತ್ತಿದೆ.  ಜಿಲ್ಲೆಯಲ್ಲಿ ಬರೋಬ್ಬರಿ 251 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.

ಮರಿಯಾನೆ ರಕ್ಷಣಾ ಕಾರ್ಯದ ವಿಡಿಯೋ ವೈರಲ್…!

ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ಪೊಲೀಸರಲ್ಲಿ ಸೋಂಕು ಹೆಚ್ಚು ಹರಡಿದೆ. ಉತ್ತರ ಕನ್ನಡದಲ್ಲಿ 251 ಪೊಲೀಸರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಅವರಲ್ಲಿ 188 ಪೊಲೀಸರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 63 ಪೊಲೀಸರು ಹೋಂ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಜಲು ಹೋದವನ ಮೇಲೆರಗಿದ ಮೊಸಳೆ..!

ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆ ನಗರಗಳಿಂದ ಹಳ್ಳಿಗಳತ್ತ ಜನರು ಮುಖಮಾಡಿದ್ದಾರೆ. ಜನರ ಓಡಾಟ ನಿಯಂತ್ರಿಸಲು ಪೊಲೀಸರು ರಸ್ತೆ ರಸ್ತೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇದು ಕೂಡ ಪೊಲೀಸರಲ್ಲಿ ಸೋಂಕು ಹೆಚ್ಚು ಹರಡಲು ಕಾರಣವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 1555 ಪೊಲೀಸ್ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ. ಮುಂಜಾಗೃತಾ ಕ್ರಮವಾಗಿ ಪ್ರತಿ ಠಾಣೆಗಳಲ್ಲಿ ಹಬೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...