alex Certify ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ; ಅಡಿಕೆ ತೋಟ ಸಂಪೂರ್ಣ ನಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ; ಅಡಿಕೆ ತೋಟ ಸಂಪೂರ್ಣ ನಾಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಅಡಿಕೆ ತೋಟಗಳು ಸಂಪೂರ್ಣ ನಾಶವಾಗಿರುವ ಘಟನೆ ನಡೆದಿದೆ.

ಶಿರಸಿ ತಾಲೂಕಿನ ಮತ್ತಿಘಟ್ಟ ಕೆಳಗಿನ ಕೇರಿ ಗ್ರಾಮದಲ್ಲಿ ಭೂಕುಸಿತವುಂಟಾಗಿದೆ. ಮದುಸೂದನ್ ಹೆಗಡೆ ಅವರಿಗೆ ಸೇರಿದ 1 ಎಕರೆ ಅಡಿಕೆ ತೋಟ ಸಂಪೂರ್ಣ ನಾಶವಾಗಿದ್ದು, ಅಡಿಕೆ ಬೆಳೆಗಳು ಮಣ್ಣು ಪಾಲಾಗಿವೆ. ಇದ್ದಕ್ಕಿದ್ದಂತೆ ಭೂಮಿ ಕುಸಿತಗೊಂಡಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...